ಆ.20: ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ- ಸಾಧಕರಿಗೆ ಸನ್ಮಾನ, ನುಡಿ ನಮನ, ವಿದ್ಯಾರ್ಥಿ ವೇತನ ವಿತರಣೆ

0

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ, ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ
170ನೇ ಗುರುಜಯಂತಿ, ಸಂಘದ ಗೌರವಾಧ್ಯಕ್ಷರಾಗಿದ್ದ ಮಾಜಿ ಶಾಸಕ ದಿ|ಕೆ.ವಸಂತ ಬಂಗೇರರವರಿಗೆ ಹಾಗೂ ಮಾಜಿ ಉಪಾಧ್ಯಕ್ಷರಾಗಿದ್ದ ದಿ। ಶೇಖರ ಬಂಗೇರ ಹೇರಾಜೆಯವರಿಗೆ ನುಡಿ ನಮನ, ಸಮಾಜದ ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಆ.20ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ಜರಗಲಿದೆ.

ಸಭಾ ಕಾರ್ಯಕ್ರಮದ ಉದ್ಘಾಟಕರಾಗಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ವಹಿಸಲಿದ್ದು, ಪ್ರಧಾನ ಭಾಷಣಗಾರರಾಗಿ ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಾಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಭಾಗವಹಿಸಲಿದ್ದು, ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ಗೌರವ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವಿಕಾರ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಯವಿಕ್ರಮ್, ಪ್ರಧಾನ ಕಾರ್ಯದರ್ಶಿ ನಿತೇಶ್ ಹೆಚ್., ಕೋಶಾಧಿಕಾರಿ ಪ್ರಶಾಂತ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here