Site icon Suddi Belthangady

ಕೊಯ್ಯೂರು: ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಕೊಯ್ಯೂರು: “ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ತುಳು ಆಚರಣೆಗಳ ವೈಚಾರಿಕತೆ ಮತ್ತು ವೈಜ್ಞಾನಿಕ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲು ವರ್ಷದ 12 ತಿಂಗಳಲ್ಲಿ ಆಟಿ ಅದರದೇ ಆದ ಮಹತ್ವ ಹೊಂದಿದ್ದು, ಆಟಿ ಅಮಾವಾಸ್ಯೆ, ನಾಗರ ಪಂಚಮಿ ಹಬ್ಬಗಳು ಮತ್ತು ಆಟಿ ಕಲೆಂಜದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ಪ್ರಾಚಾರ್ಯ ಮೋಹನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಹೇಮಾವತಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಛಮೆ, ಬಂಟ್ವಾಳ ನ್ಯಾಯಾಲಯದ ಎಪಿಪಿ ಹರಿಣಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಪ್ರಜ್ಞಾ, ಭವ್ಯ, ಪ್ರಮಿತ, ಕವಿತಾ, ನಿಶ್ಮಿತಾ ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಭವ್ಯ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ, ಸಮಾಜ ಶಾಸ್ತ್ರ ಉಪನ್ಯಾಸಕ ಮಾಯಿಲ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪ್ರೀತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕನ್ನಡ ಉಪನ್ಯಾಸಕಿ ರಶ್ಮಿದೇವಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version