ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಅರವಿಂದ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿ’ಸೋಜಾ ಇವರಿಗೆ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ನಿರ್ದೇಶಕರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಪಡ್ಪು, ಕುಮಾರ ನಾಯ್ಕ ಉಪಸ್ಥಿತರಿದ್ದರು.