ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ 2023-24ನೇ ಸಾಲಿನ ಮಹಾಸಭೆಯಲ್ಲಿ ಸಾಧನ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ಪರವಾಗಿ ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್ ಹಾಗೂ ಇತರ ನಿರ್ದೇಶಕರುಗಳು, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಆನಂದ ಪೂಜಾರಿ, ಸರ್ವೆದೋಳ ಉಪಸ್ಥಿತರಿದ್ದರು.