Site icon Suddi Belthangady

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ: 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾಧನೆಗಾಗಿ ಪದ್ಮುಂಜಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಮತ್ತು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ರವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ದೇಶಕ ಕುಶಾಲಪ್ಪ ಗೌಡ ಹಾಗೂ ಇತರ ನಿರ್ದೇಶಕರು ಹಾಗೂ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಶೀಲಾವತಿ ಮತ್ತು ಉದಯ ಬಿ.ಕೆ. ಉಪಸ್ಥಿತರಿದ್ದರು.

Exit mobile version