Site icon Suddi Belthangady

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಾವೇ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಅನಸೂಯಾ, ಕರುಣಾಕರ ಜೈನ್, ಲೋಹಿತ್ ಕುಮಾರ್ ಜೈನ್ ಹಾಗೂ ಎಲ್ಲ ಸಹೋದ್ಯೋಗಿಗಳು ‌ಮತ್ತು ಸ್ವ ಉದ್ಯೋಗ ತರಬೇತಿಯನ್ನು ಪಡೆಯುತ್ತಿರುವ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Exit mobile version