ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಂಡಲದ ಯುವಮೋರ್ಚಾ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಬೈಕ್ ಜಾಥದ ಮೂಲಕ ಆಚರಿಸಲಾಯಿತು.
ಶಾಸಕ ಹರೀಶ್ ಪೂಂಜರವರು ಚಾಲನೆ ನೀಡಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್ ರವರು ಸ್ವಾತಂತ್ರ್ಯ ಉತ್ಸವದ ಮಹತ್ವ ತಿಳಿಸಿದರು.ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಹಾಗು ಎಲ್ಲಾ ಪದಾಧಿಕಾರಿಗಳು ಹಾಗು ಯುವಮೋರ್ಚಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಯುವಮೋರ್ಚಾ ಮಂಡಲ ಉಪಾಧ್ಯಕ್ಷ ಗಣೇಶ್ ಲಾಯಿಲ ಸ್ವಾಗತಿಸಿ, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಧನ್ಯವಾದ ನೀಡಿದರು.