ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 78ನೇ ಸ್ವಾತಂತ್ರ್ಯೋವವು ಶಾಲಾ ಸಂಚಾಲಕರಾದ ವಂ.ಫಾ.ಅಬೆಲ್ ಲೋಬೋರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಂಡತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿ ಉಪನ್ಯಾಸಕ ನೆಲ್ಸನ್ ಮೋನಿಸ್ ರವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋವದ ಶುಭ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಕರೆಯಿತ್ತರು.

ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೋ, ಎಸ್.ಎಮ್.ಐ ಸಭೆಯ ಮುಖ್ಯಸ್ಥ ಸಿಸ್ಟರ್ ಅನ್ಸಿ ಪ್ರಾನ್ಸಿಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆನಾಂಡೀಸ್ ಕಾರ್ಯದರ್ಶಿ ಲಿಗೋರಿ ವಾಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಅನಿತಾ ಮೋನಿಸ್, ಸ್ಟಾನಿ ಪಿಂಟೋ, ಹಾಗೂ ಪಂಚಾಯತ್ ಸದಸ್ಯರಾದ ಅನಿಲ್ ಡಿಸೋಜ ಮತ್ತು ಪ್ರವೀಣ್ ಡಿಸೋಜ ಬೆಳಾಲ್ ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರಗಿದವು.

ಐರಿನ್ ರೊಡ್ರಿಗಸ್ ರವರು ನಿರೂಪಿಸಿ ವಂದಿಸಿದರು

LEAVE A REPLY

Please enter your comment!
Please enter your name here