ಬೆಳಾಲು: ಇಲ್ಲಿನ ಸ.ಉ.ಪ್ರಾ.ಶಾಲೆ ಮಾಯದಲ್ಲಿ ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಬೆಳಾಲು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಜಯಂತಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಇಂಡಿಯನ್ ಬ್ಯಾಂಕ್ ವತಿಯಿಂದ ಮೆನೇಜರ್ ಶ್ರೀನಿವಾಸ ಎನ್. ಹತ್ತು ಹೆಣ್ಣಿನ ಗಿಡಗಳನ್ನು ಶಾಲೆಗೆ ಹಸ್ತಾಂತರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಂದ್ರ ಗೌಡ ಸುರುಳಿ ವಹಿಸಿ ಭಾರತ ಮತ್ತಷ್ಟು ಬಲಿಷ್ಠವಾಗಲಿ ನಾವೆಲ್ಲರೂ ಭಾರತದ ಪ್ರಜೆಗಳಾಗಿರುವುದಕ್ಕೆ ಹೆಮ್ಮೆಪಡಬೆಕೆಂದು ತಿಳಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಪಿಲತ್ತಡಿ, ಮಾಯ ಫ್ರೇಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಗೌಡ, ಹಿದಾಯತುಲ್ ಇಸ್ಲಾಂ ಮದರಸ ಸಮಿತಿಯ ಅಧ್ಯಕ್ಷ ಹಕೀಂ, ಮಾಯ ಮಹೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಆಚಾರ್ಯ , ಅಂಗನವಾಡಿ ಕಾರ್ಯಕರ್ತೆ ಲೋಕಮ್ಮ, ಶಾಲಾ ಸಂಸತ್ ನಾಯಕ ಚರಣ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ಸಾಂಸ್ಕೃತಿಕ ಮಂತ್ರಿ ಸೃಜನ್ಯ ಕಾರ್ಯಕ್ರಮ ನಿರೂಪಿಸಿ ಮುಖ್ಯ ಶಿಕ್ಷಕ ವಿಠಲ್ ಎಂ. ಸ್ವಾಗತಿಸಿದರು. ಜಿಪಿಟಿ ಶಿಕ್ಷಕ ಯೋಗೇಶ ಸ್ವಾತಂತ್ರ್ಯ ಹೋರಾಟದ ಕುರಿತು ಮಾತನಾಡಿದರೆ, ಶಿಕ್ಷಕಿ ಜ್ಯೋತಿ ಎಂ.ಎಸ್. ವಂದಿಸಿದರು. ಅತಿಥಿ ಶಿಕ್ಷಕರಾದ ಪ್ರಜ್ಞಾ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು.ಗುರುಪ್ರಸನ್ನ ಇವರು ಸಿಹಿ ತಿಂಡಿ ವ್ಯವಸ್ಥೆ ಮಾಡಿದವರ ಪಟ್ಟಿ ವಾಚಿಸಿದರು.