Site icon Suddi Belthangady

ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ಆಚರಣೆ

ಪದ್ಮುಂಜ: ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ಆಚರಣೆ ನಡೆಯಿತು.ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವoತ್ ರವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಪಂಚಾಯತ್ ಸದಸ್ಯರಾದ ಸುಮತಿ, ಸೀತಾರಾಮ ಮಡಿವಾಳ ಹಾಗೂ ಶಾಲಾಭಿವೃದ್ಧಿ ಪದಾಧಿಕಾರಿಗಳು, ಸದಸ್ಯರು, ಎಲ್ಲಾ ಶಿಕ್ಷಕ ವೃಂದ ಪೋಷಕರು ಹಾಜರಿದ್ದರು.ಸ್ವಾತಂತ್ರ್ಯೋತ್ಸವದ ಬಗ್ಗೆ ಪದ್ಮುಂಜ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮತಿ ಪಿ.ಏನ್ ಸ್ವಾತಂತ್ರೋತ್ಸವದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು.

ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳು ಶಾಲೆಯಿಂದ ಕೆನರಾ ಬ್ಯಾಂಕ್ ವರೆಗೆ ಮೆರವಣಿಗೆ ನಡೆಸಿದರು. ಮೆರವಣಿಗೆ ಉದ್ದಕ್ಕೂ ಪದ್ಮುಂಜದ ಅಂಗಡಿ ಮುಂಗಟ್ಟುಗಳ ಮಾಲಕರು, ಹಳೆ ವಿದ್ಯಾರ್ಥಿಗಳು, ಊರಿನವರು, ವಿದ್ಯಾ ಭಿಮಾನಿಗಳು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಪಾನೀಯ ನೀಡಿ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು.

ತದನಂತರ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ಹಂಚಲಾಯಿತು.ದೈಹಿಕ ಶಿಕ್ಷಕ ವಿನಯ್ ಕುಮಾರ್ ನಿರೂಪಿದರು.

Exit mobile version