Site icon Suddi Belthangady

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜೃಂಭಣೆಯ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ದೇಶದ 78ನೆಯ ಸ್ವಾತಂತ್ರ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.ಈ ಸಂಭ್ರಮಾಚರಣೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್ ಇಲ್ಲಿಯ ಫಾ.ಪ್ರವೀಣ್ ಡಿ’ಸೋಜಾ ನೆರೆವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲಂಕರಿಸಿದ್ದ ಶಾಲಾ ಆಡಳಿತ ಟ್ರಸ್ಟಿನ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಮಾತನಾಡಿ ಸಮಾಜದಲ್ಲಿ ನಡೆಯುವ ಅನ್ಯಾಯ ಅಸಮಾನತೆಯನ್ನು ಕಿತ್ತೊಗೆಯುವಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು ಹಾಗೂ ಭಾರತೀಯರಾದ ನಾವು ಒಂದೇ ತಾಯಿಯ ಮಕ್ಕಳಂತೆ ಬದುಕು ನಡೆಸಬೇಕು ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಸೈಯದ್ ಆಯ್ಯುಬ್, ಕೋಶಾಧಿಕಾರಿ ಸೈಯದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್, ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯ ಗುರುಗಳಾದ ಅಬ್ದುಲ್ ರಝಾಕ್ ಇಮ್ದಾದಿ, ಅರೇಬಿಕ್ ಶಿಕ್ಷಣದ ಗುರುಗಳಾದ ಯಾಕೂಬ್ ಮದನಿ, ಆಡಳಿತ ಮಂಡಳಿಯ ಸದಸ್ಯರಾದ ಶೇಖ್ ಅಬ್ದುಲ್ ಗಫೂರ್, ಸ್ಥಳೀಯರಾದ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಬಹಳ ಸುಂದರವಾದ ಪಥ ಸಂಚಲನ ಕಾರ್ಯಕ್ರಮವನ್ನು ನೆರವೇರಿಸಿದರು. ಶಾಲೆಯ ಪುಟಾಣಿ ಮಕ್ಕಳಿಂದ ನಡೆದ ಭಾರತೀಯ ಘನತೆಯನ್ನು ಸಾರುವ ವಿವಿಧ ಘಟನಾವಳಿಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ವಿದ್ಯಾರ್ಥಿಗಳ ಪೋಷಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಕಾರಣರಾದರು.

ಶಾಲಾ ವಿದ್ಯಾರ್ಥಿನಿ 10ನೇ ತರಗತಿಯ ಕುಮಾರಿ ಹುಸ್ನಾ ಬೇಗಂ ಕಾರ್ಯಕ್ರಮವನ್ನು ನಿರೂಪಿಸಿದರು. 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಝಿಶಾನ್ ಅತಿಥಿಗಳನ್ನು ಸ್ವಾಗತಿಸಿದರು. ಹಾಗೂ 9ನೇ ಕುಮಾರಿ ಫಿದಾ ಧನ್ಯವಾದ ಕಾರ್ಯಕ್ರಮವನ್ನು ನೆರವೇರಿಸಿದರು.

Exit mobile version