ಹೊಕ್ಕಾಡಿಗೋಳಿ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

0

ಆರಂಬೋಡಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ದಿನೇಶ್ ಹುಲಿಮೇರು ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಿದ ದಾನಿಗಳಾದ ಎಸ್ ಮಹಮ್ಮದ್, ಮಾಲಕರು, ಟೋಟಲ್ ಲಾಂಡ್ರಿ ಹಾಗೂ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಸದಾಶಿವ ಹುಲಿಮೇರು ಇವರನ್ನು ಸನ್ಮಾನಿಸಲಾಯಿತು.

ಮಕ್ಕಳಿಂದ ವಿವಿಧ ಮನರಂಜನಾ ಕಾರ್ಯಕ್ರಮ ನೆರವೇರಿತು. ಈ ಸಭೆಯಲ್ಲಿ ಎಸ್. ಡಿ.ಎಂ.ಸಿ ಅಧ್ಯಕ್ಷ ದಿನೇಶ್ ಹುಲಿಮೇರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಚಂದ್ರ ಜಂತೋಡಿ, ಉಪಾಧ್ಯಕ್ಷೆ ತೇಜಸ್ವಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಅಜ್ಜಾಡಿ, ಪ್ರಭಾಕರ ಎಚ್, ದಾನಿಗಳು ಹಾಗೂ ಉದ್ಯಮಿ ರಾಘವೇಂದ್ರ ಭಟ್, ಕಿರಣ್ ಮಂಜಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಮಂಜಿಲ ಉಪಸ್ಥಿತರಿದ್ದರು.

ಶಿಕ್ಷಕಿ ಸುಚಿತ್ರ ಸನ್ಮಾನ ಪತ್ರ ವಾಚಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಮಿತ್ರ ಎಸ್. ಸ್ವಾಗತಿಸಿ ದೈಹಿಕ ಶಿಕ್ಷಕಿ ಮೆಟಿಲ್ಡ ಧನ್ಯವಾದವಿತ್ತರು. ಶಿಕ್ಷಕಿ ಸಿಲ್ವಿಯಾ ಮಿರಾಂದ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕರಾದ ಶ್ರೀಮತಿ ಶುಭ, ಶ್ರೀಮತಿ ಅಕ್ಷತಾ, ಕುಮಾರಿ ಸುತೀಕ್ಷ ಸಹಕರಿಸಿದರು.

LEAVE A REPLY

Please enter your comment!
Please enter your name here