ಪುಂಜಾಲಕಟ್ಟೆ: ಕೆ ಪಿ ಎಸ್ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗವು ಜಂಟಿಯಾಗಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ. ಸರೋಜಿನಿ ಆಚಾರ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆಕೊಟ್ಟರು.
ಸಂಸ್ಥೆಯ ಎನ್ ಸಿ ಸಿ ಅಧಿಕಾರಿ ನಿರಂಜನ್ ಜೈನ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಉಪಪ್ರಾಂಶುಪಾಲ ಉದಯ ಕುಮಾರ್ ಜೈನ್ ವಂದಿಸಿದರು.
ಎನ್ ಸಿ ಸಿ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿ ಅತಿಥಿ ಅಭ್ಯಾಗತರಿಗೆ ಗೌರವ ವಂದನೆ ಸಲ್ಲಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.