ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಭಾರತೀಯ ವಾಯುಪಡೆಯ ಮಾಜಿ ಮಿಲಿಟರಿ ಅಧಿಕಾರಿ (ಸಾರ್ಜೆಂಟ್) ರೊನಾಲ್ಡ್ ಪಿರೇರಾ ಧ್ವಜಾರೋಹಣ ಗೈದು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ ಸಂಚಾಲಕರಾದ ಅತೀ ವಂ.ಫಾ.ವಾಲ್ಟರ್ ಡಿಮೆಲ್ಲೋ ರವರು ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿ ಶುಭ ಹಾರೈಸಿದರು. ಶಾಲಾ ವಾದ್ಯ ತಂಡದ ವಿದ್ಯಾರ್ಥಿಗಳು ರಾಷ್ಟ್ರ ಧ್ವಜಕ್ಕೆ ಗೌರವ ನಮನ ಸಲ್ಲಿಸಿದರು.ವಿದ್ಯಾರ್ಥಿಗಳು ದೇಶಪ್ರೇಮವನ್ನು ಬಿಂಬಿಸುವ ಗೀತೆ ಮತ್ತು ನೃತ್ಯಗಳ ಮೂಲಕ ಎಲ್ಲರ ಮನ ರಂಜಿಸಿದರು. ವಿದ್ಯಾರ್ಥಿನಿ ರಿಯೋನ ಮೋನಿಸ್ ಸ್ವಾತಂತ್ರ್ಯೋತ್ಸವದ ಕುರಿತು ಮಾತನಾಡಿದರು.

ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಚರ್ಚ್ ನ 21 ಆಯೋಗಗಳ ಸಂಯೋಜಕಿ ಪೌಲಿನ್ ರೇಗೊ, ಫಾ. ಅಜಯ್, ಚರ್ಚ್ ಶಾಲಾ ಮುಖ್ಯೋಪಾಧ್ಯಾಯಿನಿ ರೆನ್ನಿ ವಾಸ್, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರಮೇಶ್,‌ ಪೋಷಕರು ಹಾಗೂ ದೇಶಾಭಿಮಾನಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಿದರು. ಶಾಲಾ ವಿದ್ಯಾರ್ಥಿನಿಯರು ತಾಲೂಕು ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜ ಗೀತೆಯನ್ನು ಹಾಡಿದರು. ವಿದ್ಯಾರ್ಥಿಗಳಾದ ಜೆನಿಶಾ ವೇಗಸ್ ಸ್ವಾಗತಿಸಿ, ರೀಶೆಲ್ ಡಿಸೋಜ ವಂದಿಸಿ, ಪ್ರೇಕ್ಷಾ ಕೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here