ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಉಜಿರೆಯ ರತ್ನಮಾನಸದ ಪಾಲಕ ಯತೀಶ್ ನೆರವೇರಿಸಿಕೊಟ್ಟರು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಶಾಲಾ ಧ್ವಜಾರೋಹಣದ ನಂತರ ಪುದುವೆಟ್ಟುನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯನ್ನು ಮಾಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಯತೀಶ್ ಸ್ವಾತಂತ್ರ್ಯ ದಿನದ ಮಹತ್ವ ಪ್ರಜಾಪ್ರಭುತ್ವದ ಅರ್ಥ ಹಾಗೂ ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ವೇದಿಕೆಯಲ್ಲಿ ಆಸೀನರಾಗಿದ್ದ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡ ಸ್ವಾತಂತ್ರ್ಯಕ್ಕಾಗಿ ದುಡಿದು ಮಡಿದ ಮಹನೀಯರನ್ನು ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಪುದುವೆಟ್ಟು ವಲಯದ ಮುಖ್ಯಸ್ಥ ಶಶಿಧರ್ ಗುಂಪಕಲ್ಲು, ಶಾಲೆ ಹಿರಿಯ ಶಿಕ್ಷಕಿ ತೇಜಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನದ ಪ್ರಯುಕ್ತ ಮಕ್ಕಳಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಶಾಲೆಯ ಪೋಷಕ ಬಂಧುಗಳು ಹಾಗೂ ಹಳೆ ವಿದ್ಯಾರ್ಥಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶೀಲಾ ಧನ್ಯವಾದಗೈದರು. ಕಾರ್ಯಕ್ರಮವನ್ನು ನಿಶಾಂತ್ ಕುಮಾರ್ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು. ಸೇರಿರುವ ಎಲ್ಲರಿಗೂ ಆಡಳಿತ ಮಂಡಳಿಯ ವತಿಯಿಂದ ಟಿಕ್ಕ ಸಾಹೇಬ್, ಯತೀಶ್ ಹಾಗೂ ಕೆಲ ಪೋಷಕರು ಸಿಹಿತಿಂಡಿ ನೀಡಿ ಸಹಕರಿಸಿದರು.

LEAVE A REPLY

Please enter your comment!
Please enter your name here