p>
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮೆರವಣಿಗೆ ಮೂಲಕ ಆಚರಿಸಲಾಯಿತು.ಧ್ವಜಾರೋಹಣ ವನ್ನು ಕ್ಷೇತ್ರದ ಪಾರುಪತ್ಯಗಾರ ಲಕ್ಷ್ಮೀ ನಾರಾಯಣ ರಾವ್ ಇವರು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮಾತನಾಡಿದರು.
ಕಾರ್ಯಕ್ರಮ ದಲ್ಲಿ ಶಾಲಾ ಮುಖ್ಯ ಗುರುಗಳಾದ ಶ್ರೀ ಕಮಲ್ ತೇಜು ರಜಪೂತ ಇವರು ಉಪಸ್ಥಿತರಿದ್ದರು. ಮಹಾತ್ಮಾ ಗಾಂಧೀಜಿ ಮತ್ತು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು. ಶೇಖರ್ ಸ್ವಾಗತಿಸಿ, ರಾಜೇಶ್ವರಿ ವಂದಿಸಿದರು.ಎಲ್ಲಾ ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
p>