Site icon Suddi Belthangady

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನೆರವೇರಿತು.ಈ ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ಆಗಮಿಸಿದ ಮಂಗಳೂರು ಧರ್ಮಪ್ರಾಂತ್ಯದ ವಂದನೀಯ ಫಾ.ಮೊನ್ಸಿಜೋರ್ ಮ್ಯಾಕ್ಸಿಮ್ ಎಲ್ ನೊರೊನ್ಹ ರವರು ಧ್ವಜಾರೋಹಣವನ್ನು ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು.

ಶಾಲಾ ಸಂಚಾಲಕರಾದ ವಂದನೀಯ ಫಾ.ಎಲಿಯಸ್ ಡಿ’ಸೋಜಾರವರು ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗರ್ಡಾಡಿ ಚರ್ಚ್ ನ ಧರ್ಮ ಗುರುಗಳಾದ ಫಾ. ರೋಹನ್ ಲೋಬೊ
ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಪಾಯ್ಸ್, ಮುಖ್ಯ ಶಿಕ್ಷಕ ನಾಬರ್ಟ್ ವಿನ್ಸೆಂಟ್ ಪೌಲ್ ರವರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 10ನೇ ತರಗತಿ ವಿದ್ಯಾರ್ಥಿನಿಯರಾದ ಕು.ಡಿಯೋನಾ ಪರ್ಲ್ ಕ್ರಾಸ್ತ ರವರು ನಿರೂಪಿಸಿ, ಕು.ವಿಯೋಲ ಡೆಲೀಶ ಅಂದ್ರಾದೆ ಸ್ವಾಗತಿಸಿ, ಕುಮಾರಿ ಅನುಜ್ಞಾ ವಂದಿಸಿದರು.

Exit mobile version