ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ವಿಜೃಂಭಣೆಯಿಂದ ಆ 16ರಂದು ನೆರವೇರಿತು.ಸುಮಾರು 150ಕ್ಕು ಹೆಚ್ಚು ಊರಿನ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು ಲಕ್ಷ್ಮಿ ದೇವರ ಕೃಪೆಗೆ ಪಾತ್ರರಾದರು.
ಮಧ್ಯಾಹ್ನ ಮಹಾ ಪೂಜೆಯ ನಂತರ ಪ್ರಸಾದ ವಿತರಣೆ ಜೊತೆ ಅನ್ನಸಂತರ್ಪಣೆ ನೆರವೇರಿತು.
ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್ ಕಾಯಡ, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಶ್ರೀ ದುರ್ಗಾ ಮಹಿಳಾ ಮಂಡಳಿ ಅಧ್ಯಕ್ಷೆ ಡೀಕಮ್ಮ ಶೀನಪ್ಪ ಗೌಡ, ಕಾರ್ಯದರ್ಶಿ ಶಾರದಾ ಕೃಷ್ಣಪ್ಪ ಗೌಡ ಮತ್ತು ದೇವಳದ ಸರ್ವ ಸದಸ್ಯರು ಮತ್ತು ಮಂಡಳಿಯ ಸರ್ವಸದಸ್ಯರು ಉಪಸ್ಥಿತರಿದ್ದರು.
p>