Site icon Suddi Belthangady

ಕೊಕ್ಕಡ: ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ.ಪೂ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಕ್ಕಡ: ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ.ಪೂ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ವಿಜೃಂಭನೆಯಿಂದ ಆಚರಿಸಲಾಯಿತು.ಶಾಲಾ ಸಂಚಾಲಕ ವಂದನೀಯ ಫಾ.ಜಿಬಿನ್ ರವರು ದ್ವಜಾರೋಹಣವನ್ನು ನಡೆಸಿಕೊಟ್ಟರು.

ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಐಸಾಕ್ ಜೋನ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಸೇನೆಯಲ್ಲಿ ದೇಶ ರಕ್ಷಣೆಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಕರೆ ನೀಡಿ ಸ್ವಾತಂತ್ರ್ಯ ದಿನಾಚರಣೆ ಸಂದೇಶ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆಸಿದ ರೀಲ್ಸ್ ಸ್ಪರ್ಧೆಯ ವಿಜೇತರನ್ನು ಫಾ.ಅರುಣ್ ರವರು ಘೋಷಿಸಿ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು.ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಕವಾಯತು ಮತ್ತು ಘೋಷಣೆ ಕೂಗಿ ಕೊಕ್ಕಡ ವೃತ್ತದವರೆಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಕಾಲೇಜು ವಿದ್ಯಾರ್ಥಿ ನಾಯಕ ಆ್ಯರೋನ್ ವಿದ್ಯಾರ್ಥಿಗಳ ಪರವಾಗಿ ನಾಯಕತ್ವ ವಹಿಸಿ, ಶಾಲಾ ವಿದ್ಯಾರ್ಥಿ ನಾಯಕಿ ತನ್ವಿ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯಕ್ರಮವನ್ನು ರೋಶಲ್ ನಿರೂಪಿಸಿದರು. ಶಾಲಾ ಸಂಚಾಲಕ ಫಾ.ಜಿಬಿನ್ ವಂದಿಸಿದರು.

Exit mobile version