ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ

0

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ16 ರಂದು ರಾಷ್ಟೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆರೋಗ್ಯ ಅಧಿಕಾರಿಯಾಗಿರುವ ಅಮ್ಮಿ. ಎ ಇವರು ಆಗಮಿಸಿದ್ದರು.ಪ್ರೌಢ ಶಾಲಾ ಹೆಣ್ಣುಮಕ್ಕಳಿಗೆ ಹದಿ ಹರೆಯದ ಸಮಸ್ಯೆಗಳು ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು.

ಪ್ರೌಢವಯಸ್ಸಿನಲ್ಲಿ ಎದುರಾಗುವ ಸಾಮಾನ್ಯ ಸಮಸ್ಯೆಗಳು ಹಾಗೂ ದೈಹಿಕ, ಮಾನಸಿಕ ಬದಲಾವಣೆಗಳು, ಭಾವನಾತ್ಮಕ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಸಿದರು. ಉತ್ತಮ ಆರೋಗ್ಯವನ್ನು ರಕ್ಷಿಸಿಕೊಳ್ಳುವ ಬಗ್ಗೆಯೂ ವಿವರವಾಗಿ ತಿಳಿಸಿದರು.ಮುಖ್ಯ ಶಿಕ್ಷಕಿ ಸ್ವಾಗತಿಸಿ 9ನೇ ತರಗತಿ ವನ್ಯಾ ವಂದಿಸಿದರು.

LEAVE A REPLY

Please enter your comment!
Please enter your name here