Site icon Suddi Belthangady

ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆಸಮೀಕ್ಷೆ- ನಿಖರವಾದ ಬೆಳೆ ದಾಖಲಾತಿಗೆ ರೈತರಿಗೊಂದು ಸುವರ್ಣಾವಕಾಶ

ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಆಗಸ್ಟ್ 16ರಿಂದ ಚಾಲನೆ ನೀಡಲಾಗಿದ್ದು ರೈತರು ತಮ್ಮ ಅಂಡೋಯ್ಡ್ ಮೊಬೈಲಿನ ಮೂಲಕ ತಮ್ಮ ಜಮೀನಿನ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಲಾಗಿದೆ. ರೈತರು Google Play Store ನಿಂದ https://play.google.com/store/apps/details? id=com.csk.Khariffarmer23_24.cropsurvey ಈ ಲಿಂಕ್ ಬಳಸಿ Kharif Season Farmer Crop Survey 2024-25 ಆ್ಯಪ್‌ನ್ನು ಡೌನ್‌ಲೋಡ್ ಮಾಡಿ ಪಹಣಿ ಪತ್ರದಲ್ಲಿ ಹೆಸರಿರುವ ರೈತರ ಆಧಾರ್‌ನಲ್ಲಿರುವಂತೆ ಮಾಹಿತಿಯನ್ನು ದಾಖಲಿಸಿದಾಗ, ಆಧಾರ್ ಗೆ ಜೋಡಣೆಯಾದ ಮೊಬೈಲ್ ಸಂಖ್ಯೆಗೆ ಬಂದ OTP ಯನ್ನು ದಾಖಲಿಸಿ ತದನಂತರ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ OTP ಬರಲಿದೆ. OTP ಯನ್ನು ದಾಖಲಿಸುವುದು. ಆಗ ರೈತ ನೋಂದಣಿ ಸಂಖ್ಯೆ (ಎಪ್.ಐ.ಡಿ)ಯಲ್ಲಿರುವಂತೆ ಸರ್ವೇ ನಂಬರ್ ಬರಲಿದ್ದು, ಸರ್ವೆನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡುವುದು. ರೈತ ನೋಂದಣಿ ಸಂಖ್ಯೆಯನ್ನು ಪಡೆಯಲು ಆಧಾರ್, ಆರ್.ಟಿ.ಸಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಹತ್ತಿರದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸುವುದು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು. ರೈತರು ತಮ್ಮ ಜಮೀನಿನ ಬೆಳ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು. ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್ ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು-2024 ರ ಬೆಳೆ ಸಮೀಕ್ಷ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version