ಧರ್ಮಸ್ಥಳ: ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಧರ್ಮಸ್ಥಳ, ಅಖಿಲ ಭಾರತ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರ ಉಜಿರೆ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ನವ ಜೀವನೋತ್ಸವ ಕಾರ್ಯಕ್ರಮ ಆ.17ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರಗಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ತುಮಕೂರು ಶ್ರೀಕಾರದೇಶ್ವರ ಮಠ ಬೆಳ್ಳಾವಿಯ ಶ್ರೀಕಾರದ ವೀರಬಸವ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಪಾನಮುಕ್ತರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ಗುರುತಿನ ಚೀಟಿ ವಿತರಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಣಾ ನಿರ್ದೇಶಕ ಅನಿಲ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿಯ ಟ್ರಸ್ಟಿಗಳಾದ ಡಾ. ಶ್ರೀನಿವಾಸ ಭಟ್, ವಿ. ರಾಮ ಸ್ವಾಮಿ, ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷ ರಾಜಣ್ಣ ಮೂ. ಕೊರವಿ, ಮಾಜಿ ಅಧ್ಯಕ್ಷ ಸತೀಶ್ ಹೊನ್ನಳ್ಳಿ, ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ, ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಶಿಶಿರ್ ಕುಮಾರ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿವೇಕ್ ವಿ. ಪಾಯಿಸ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ 10 ಮಂದಿಯನ್ನು ಜಾಗೃತಿ ಅಣ್ಣ, ಜಾಗೃತಿ ಮಿತ್ರ , 3 ಮಂದಿಯನ್ನು ಪಾನ ಮುಕ್ತ ಗ್ರಾಮ ಸಾಧಕರು ಪ್ರಶಸ್ತಿ ನೀಡಿ ಗೌರವಿಸಲಾಯಿತು.