ಬೆಳ್ತಂಗಡಿ: ಕೋಲ್ಕತ್ತಾದಲ್ಲಿ ಕರ್ತವ್ಯ ನಿರತ ಮಹಿಳಾ ವೈದ್ಯೆಯನ್ನು ಅಮಾನುಷ ರೀತಿಯಲ್ಲಿ ಅತ್ಯಾಚಾರ ಮಾಡಿ ಹತ್ಯೆಗೈದಿರುವ ಕೃತ್ಯವನ್ನು ಖಂಡಿಸಿ ಹಾಗೂ ಈ ಘಟನೆಯ ಬಗೆಗಿನ ಸಾಕ್ಷಿನಾಶದ ದುರುದ್ದೇಶ ಇಟ್ಟುಕೊಂಡು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ದಾಳಿಯನ್ನು ವಿರೋಧಿಸಿ ದೇಶಾದ್ಯಂತ ಡಾಕ್ಟರ್ ಗಳು ಮುಷ್ಕರ ನಡೆಸಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿರುವುದರಿಂದ ಆ.17ರಂದು ಬೆಳ್ತಂಗಡಿ ತಾಲೂಕಿನಲ್ಲಿಯೂ ಆರೋಗ್ಯ ಸೇವೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಂಡು ಬಂದಿದೆ.ತಾಲೂಕಿನ 15 ಸರ್ಕಾರಿ ಆರೋಗ್ಯ ಕೇಂದ್ರಗಳು ಸೇರಿ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಅಲಭ್ಯ.
ಭಾರತೀಯ ವೈದ್ಯಕೀಯ ಸಂಘದ ಕರೆಯಂತೆ ರಾಷ್ಟ್ರಾದ್ಯಂತ ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ವೈದ್ಯಕೀಯ ಸೇವೆ ಸ್ಥಗಿತ ಮಾಡಲಾಗಿದ್ದು ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಂಡು ಬಂದಿದೆ.
p>