Site icon Suddi Belthangady

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮರ ಅಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

ಉಜಿರೆ: ಇಂದು ಪ್ರತಿಯೋಂದು ಕೆಲಸದಲ್ಲಿ ಮನೆಯಲ್ಲಿ ವಿವಿಧ ಸಂಸ್ಥೆಗಳಲ್ಲಿ ವಿಶೇಷವಾಗಿ ಅಪರಾಧ ವಿಭಾಗದಲ್ಲಿ ಸಿಸಿ ಕ್ಯಾಮರಗಳ ಪಾತ್ರ ಮಹತ್ವದಾಗಿದೆ. ಈ ನಿಟ್ಟಿನಲ್ಲಿ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ದುರಸ್ತಿಯ ಸ್ವ ಉದ್ಯೋಗ ತರಬೇತಿ ಪಡೆದ ನಿಮಗೆ ಇವತ್ತು ತುಂಬಾ ಅವಕಾಶಗಲಿವೆ, ಏಕೆಂದರೆ ಪ್ರತಿಯೊಂದು ಆಟ, ಪಾಠ, ನೋಟಕ್ಕೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲೇ ಬೇಕು ಅನ್ನುವ ಅನಿರ್ವಾಯತೆ ಬಂದಿದೆ. ಈ ಹಿನ್ನಲೆಯಲ್ಲಿ ಇಂತಹ ತರಬೇತಿ ಪಡೆದ ನಿಮಗೆ ಮುಂದಿನಗಳನ್ನು ಬೇರೆ ಬೇರೆಯಲ್ಲಿ ಉದ್ಯಮ, ವ್ಯವಹಾರ ನಡೆಸಲು ಅನುಕೂಲವಾಗುತ್ತದೆ. ಹಾಗೇನೆ ಉತ್ತಮ ಗುಣಮಟ್ಟದ ವಸ್ತುಗಳನ್ನೇ ಬಳಸಿ, ಉತ್ತಮವಾದ ಸೇವೆ ನೀಡಿ ಎಂದು ಬೆಳ್ತಂಗಡಿ ಗ್ರಾಮಂತರ ಪೋಲಿಸ್ ವಿಭಾಗದ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಅಭಿಪ್ರಾಯಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಅಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಕೆನರಾ ಬ್ಯಾಂಕಿನಲ್ಲಿ ಹೊಸತಾಗಿ ಆರಂಭಿಸಿದ ಜನಧನ್ ಖಾತೆ ಪುಸ್ತಕ, ವಿತ್ತರಿಸಿ ಮಾತನಾಡಿದರು. ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿಯಾಗಬೇಕು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಹೊಸ ಹೊಸ ಅವಿಷ್ಕಾರಗಳ ಜೊತೆಗೆ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ಬೆಳೆಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 32 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು.ಚಂದ್ರಹಾಸ ಪ್ರಾರ್ಥನೆ ಮಾಡಿದರು, ಹರಿಕೃಷ್ಣ, ಸುಶಿಲ್, ನವೀನ ತರಬೇತಿಯ ಅನುಭವ ಹಂಚಿಕೊಂಡರು.

Exit mobile version