ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭ ಆ.17ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುರೇಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಆಂಗ್ಲ ಭಾಷೆ ಉಪನ್ಯಾಸಕ
ಶೀನಾ ನಾಡೋಳಿ ಘಟಕವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ.ಶಮೀವುಲ್ಲಾ ಸ್ವಯಂಸೇವಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಪ್ರಥಮ ದರ್ಜೆ ಕಾಲೇ ಜಿನ ಪ್ರಾಂಶುಪಾಲ ಡಾ.ಸವಿತಾ ಉಪಸ್ಥಿತರಿದ್ದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಶಿವರಾಜ್ ಗಟ್ಟಿ ಸ್ವಾಗತಿಸಿದರು. ಸಹ ಯೋಜನಾಧಿಕಾರಿಗ ಸುಷ್ಮ ವಂದಿಸಿದರು.ಸಹ ಯೋಜನಾಧಿಕಾರಿ ಕುಮಾರಿ ಚಂದನ ಅತಿಥಿಗಳ ಪರಿಚಯ ಮಾಡಿದರು. ವೇದಿಕೆಯಲ್ಲಿ ಘಟಕದ ನಾಯಕರಾದ ವಿಕಾಸ್ ಹಾಗೂ ಕುಮಾರಿ ಜಯಶ್ರೀ ಉಪಸಿತರಿದ್ದರು.
ಕುಮಾರಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.