Site icon Suddi Belthangady

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ- ಯೋಗಾಸನದಲ್ಲಿ ಕೊಕ್ರಾಡಿ ಶಾಲಾ ಶಿಕ್ಷಕಿ ಅಕ್ಕಮ್ಮ ಪ್ರಥಮ

ಬೆಳ್ತಂಗಡಿ: ಬೆಂಗಳೂರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕೊಕ್ರಾಡಿ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಅವರು ಭಾಗವಹಿಸಿ 45 ವರ್ಷ ಮೇಲ್ಪಟ್ಟ ಮಹಿಳಾ ಕಲಾತ್ಮಕ ವೈಯಕ್ತಿಕ ಯೋಗಾಸನ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದು, ರಾಷ್ಟ್ರ ಮಟ್ಟದ ಕ್ರೀಡೆಗೆ ಅರ್ಹತೆ ಪಡೆದಿದ್ದಾರೆ.

Exit mobile version