ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

0

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ 12ನೇ ವರುಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಆ.16ರಂದು ಜರುಗಿತು.

ಈ ಸಂದರ್ಭದಲ್ಲಿ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ಜಯಾನಂದ ಪೂಜಾರಿ ಕೊರಲ್ಲ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ, ಪ್ರಗತಿ ಬಂದು ಒಕ್ಕೂಟದ ಅಧ್ಯಕ್ಷ ಬಿ.ಚಂದಪ್ಪ ಪೂಜಾರಿ ಭೈರೊಡ್ಚಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯ ಮೇಲ್ವಿಚಾರಕಿ ಸುಮಂಗಲ, ನಾವರ ಸೇವಾ ಪ್ರತಿನಿಧಿ ಪುಷ್ಪಾವತಿ ನಿತ್ಯಾನಂದ ನಾವರ, ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಪ್ರಗತಿ ಬಂದು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

LEAVE A REPLY

Please enter your comment!
Please enter your name here