ಬೆಳ್ತಂಗಡಿ: ಮುಗುಳಿ ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯಕ್ಕೆ ಆವರಣ ಗೋಡೆ ನಿರ್ಮಿಸಿ-ಭದ್ರತಾ ಸಿಬ್ಬಂದಿ ನೇಮಕ ಮಾಡುವ ಕುರಿತು ಜಿಲ್ಲಾ ಕೆ.ಡಿ.ಪಿ. ಸದಸ್ಯ, ನ್ಯಾಯವಾದಿ ಸಂತೋಷ್ ಕುಮಾರ್ ಜಿಲ್ಲಾಧಿಕಾರಿಗೆ ಮನವಿ

0

ಬೆಳ್ತಂಗಡಿ: “ಸೋರುವ ವಸತಿ ಶಾಲೆಯಲ್ಲಿ ಮಕ್ಕಳಿಗೆ ಪಾಠ” ಎಂಬ ಶೀರ್ಷಿಕೆ ಯಡಿಯಲ್ಲಿ ಆ.08ರಂದು ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ ಪ್ರಕಟಗೊಂಡ ವರದಿಗೆ ಸಂಬಂಧಿಸಿದಂತೆ ನಾನು ಆ.08ರಂದು ಆವಾಸೀಯ ಶಾಲೆಗೆ ಬೇಟಿ ಕೊಟ್ಟು ಪರಿಶೀಲಿಸಿದಾಗ, ಶಾಲೆಯ ಬಹುತೇಕ ಕೊಠಡಿಗಳಲ್ಲಿ ನೀರು ಸೋರುತ್ತಿರುವುದು ಕಂಡುಬಂದಿರುತ್ತದೆ. ಶಾಲೆಯಲ್ಲಿ 26 ಮಂದಿ ಬಾಲಕಿಯರು ಹಾಗೂ 74 ಮಂದಿ ಬಾಲಕರು ಒಟ್ಟಾಗಿ 100 ವಿದ್ಯಾರ್ಥಿಗಳು 6ನೇ ತರಗತಿಯಿಂದ 8ನೇ ತರಗತಿಯವರೆಗೆ ವಿದ್ಯಾರ್ಜನೆಯನ್ನು ಮಾಡುತ್ತಿದ್ದಾರೆ.

ಶಾಲೆಯನ್ನು ಪರಿಶೀಲಿಸುವ ಸಂದರ್ಭದಲ್ಲಿ ಶಾಲೆಗೆ ಯಾವುದೇ ಆವರಣಗೋಡೆ ಹಾಗೂ ಭದ್ರತಾ ಸಿಬ್ಬಂದಿ ಕಂಡುಬಂದಿರುವುದಿಲ್ಲ. ಶಾಲೆಯ ಮುಖ್ಯೋಪಾಧ್ಯಾಯರನ್ನು ವಿಚಾರಿಸಿದಾಗ ಶಾಲೆಗೆ ಭದ್ರತಾ ಸಿಬ್ಬಂದಿ ನೇಮಕವಾಗಿರುವುದಿಲ್ಲ ಎಂಬ ವಿಚಾರವನ್ನು ನನ್ನ ಗಮನಕ್ಕೆ ತಂದಿರುತ್ತಾರೆ.ಆದ್ದರಿಂದ ತಾವು ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಭದ್ರತಾ ಹಿತ ದೃಷ್ಟಿಯಿಂದ ಕೂಡಲೇ ಶಾಲೆಗೆ ಆವರಣಗೋಡೆ ನಿರ್ಮಾಣ, ಭದ್ರತಾ ಸಿಬ್ಬಂದಿ ನೇಮಳಿ ಹಾಗೂ ಸೋರುತ್ತಿರುವ ಶಾಲಾ ಕಟ್ಟಡವನ್ನು ಸರಿಪಡಿಸುವರೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

p>

LEAVE A REPLY

Please enter your comment!
Please enter your name here