ಬೆಳ್ತಂಗಡಿ: ಮಂಗಳೂರು ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು ಕೃಷಿ ವಿಜ್ಞಾನ ಕೇಂದ್ರ, ಕಾಸರಗೋಡು ಸಿಪಿಸಿಆರ್‌ಐ, ಬೆಳ್ತಂಗಡಿ ತಾಲೂಕು ಪಂಚಾಯತ್, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್‌ನ ಜಂಟಿ ಆಶ್ರಯದಲ್ಲಿ ಪ.ಜಾತಿ ರೈತರಿಗೆ ವೈಜ್ಞಾನಿಕ ತೆಂಗು ಕೃಷಿ ತರಬೇತಿ ಕಾರ್ಯಕ್ರಮ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆ.17ರಂದು ನಡೆಯಿತು.
ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿ-ಮುಖ್ಯಸ್ಥ ಡಾ| ಟಿ.ಜೆ ರಮೇಶ್ ಕಾರ್ಯಕ್ರಮ ಉದ್ಘಾಟಿಸಿದರು.ತಾ.ಪಂ.ವ್ಯವಸ್ಥಾಪಕ ಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಗಳಾಗಿ ವಿಜ್ಞಾನಿ ಡಾ.ಹರೀಶ್ ಶೆಣೈ ಹಾಗೂ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕಾ ನಿರ್ದೇಶಕ ಚಂದ್ರಶೇಖರ್ ಮಾಹಿತಿ ನೀಡಿದರು.
ಮುಖ್ಯ ಅಥಿತಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ತೆಂಗಿನ ಗಿಡಗಳನ್ನು ವಿತರಿಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಸ್ವಾಗತಿಸಿ, ವಲಯ ಮೇಲ್ವಿಚಾರಕ ಜಯಾನಂದ್ ಕಾರ್ಯಕಮ ನಿರೂಪಿಸಿದರು.
p>