Site icon Suddi Belthangady

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ- ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ.ಕೆ, ಹರೀಶ್ ಸoಬೊಲ್ಯ, ಪವನ್, ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.

Exit mobile version