Site icon Suddi Belthangady

ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟವು ಆ.21ರಂದು ನಡೆಯಿತು. ಈ ಪಂದ್ಯಾಟದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

7ನೇ ತರಗತಿಯ ಮೊಹಮ್ಮದ್ ಮುಜಾಮಿಲ್ ಇವರು ಉತ್ತಮ ಸವ್ಯಸಾಚಿ ಆಟಗಾರ ಎಂಬ ಟ್ರೋಫಿಯನ್ನು ಪಡೆದುಕೊಂಡಿರುತ್ತಾರೆ.ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ಇವರು ತರಬೇತಿಯನ್ನು ನೀಡಿರುತ್ತಾರೆ.

Exit mobile version