ಬೆಳ್ತಂಗಡಿ: ಬೆಳ್ತಂಗಡಿ ದಾರುಸ್ಸಲಾಂ ಎಜುಕೇಶನ್ ಸೆಂಟರ್ ನ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಕಕ್ಕಿಂಜೆ ಚಿಬಿದ್ರೆಯಲ್ಲಿ ನಡೆಯಿತು.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೇರವೇರಿಸಿ ಕ್ಯಾಂಪಸ್ ಗೆ ವಾದಿ ಸಲಾಮತಿ ವಲ್ ಹುದಾ ಎಂದು ನಾಮಕರಣ ಮಾಡಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರ ನೇತೃತ್ವದಲ್ಲಿ ದಾರುಸ್ಸಲಾಂ ಸಂಸ್ಥೆಯು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತಿದ್ದು ಚಿಬಿದ್ರೆಯಲ್ಲಿ ಆರಂಭಗೊಳ್ಳುವ ಸಂಸ್ಥೆಯು ಮಹತ್ತರ ಯೋಜನೆಯಲ್ಲಿ ಎಲ್ಲರೂ ಕೈಜೋಡಿಸಬೇಕು ಸಹಾಯ ಸಹಕಾರ ಮಾಡುವ ಎಲ್ಲರನ್ನೂ ದೇವರು ಅನುಗ್ರಹಿಸಲಿ ಎಂದರು.
ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಬಂಬ್ರಾಣ ಅಬ್ದುಲ್ ಖಾದರ್ ಖಾಸಿಮಿ, ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ದಾರುಸ್ಸಲಾಂ ಆಡಳಿತ ಸಮಿತಿಯ ಪದಾಧಿಕಾರಿಗಳು, ದುಬೈ, ಅಬುಧಾಬಿ, ಶಾರ್ಜಾ ಸಮಿತಿಯ ಪ್ರತಿನಿಧಿಗಳು, ಸ್ವಾಗತ ಸಮಿತಿಯ ನೇತಾರರು ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದರು.