ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ಮುಹಮ್ಮದ್ ಫಾಝಿಮ್ ರಾಜ್ಯಮಟ್ಟದ ಕರಾಟೆಯಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ

0

ಉಜಿರೆ: ಆ.17ರಂದು ಮೂಡಬಿದ್ರೆಯ ಎಂ.ಕೆ.ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ  ಶೋರಿನ್ ರಿಯು ಕರಾಟೆ ಅಸೋಸಿಯೇಶನ್ ಮತ್ತು ಸ್ವಾಮಿಸ್ ಸ್ಟ್ರೆಂತ್ ಟ್ರೈನಿಂಗ್  ಸಹಯೋಗದೊಂದಿಗೆ ನಡೆದ 21ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್-2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫಾಝಿಮ್ ಅವರು ಕರಾಟೆ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಪಡೆದು ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶಿಹಾನ್ ಅಬ್ದುಲ್ ರೆಹಮಾನ್ ಅವರಿಂದ ತರಬೇತಿ ಪಡೆದಿದ್ದಾರೆ.ಇವರು ಫಾಝೀ ಫ್ಯಾಸನ್ ಉಜಿರೆ ಇದರ ಮಾಲಕರಾದ ಝೀನತ್ ಫಾರೂಕ್ ಇವರ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here