ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಭೌತಶಾಸ್ತ್ರಕ್ಕೆ ಸಂಬಂಧಿಸಿದ ಪ್ರಯೋಗಗಳ ಪ್ರಾತ್ಯಕ್ಷಿಕೆ ನಡೆಯಿತು.ಈ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಎಸ್ ಎನ್ ಕಾಕತ್ಕರ್ ಮತ್ತು ಸಹಾಯಕ ಪ್ರಾಧ್ಯಾಪಕ ಅಪೇಕ್ಷ ಜೈನ್, ನಮೃತಾ ಜೈನ್ ಆಗಮಿಸಿ, ಮಕ್ಕಳಿಗೆ ಭೌತಶಾಸ್ತ್ರ ಪ್ರಯೋಗಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.
ಬಳಿಕ ವಿದ್ಯಾರ್ಥಿಗಳ ಸಂದೇಹವನ್ನು ಪ್ರಶ್ನೋತ್ತರ ಮುಖಾಂತರ ಪರಿಹರಿಸಿದರು. ವಿದ್ಯಾರ್ಥಿನಿ ಕುಮಾರಿ ಧನ್ಯ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರೀಮತಿ ರಮಾ ಸ್ವಾಗತಿಸಿ, ವಿದ್ಯಾರ್ಥಿನಿ ಕುಮಾರಿ ಅಂಜನ ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಹಾಗೂ ವಿಜ್ಞಾನ, ಗಣಿತ ಶಿಕ್ಷಕಿಯರು ಪಾಲ್ಗೊಂಡಿದ್ದು, ಎಸ್ ಡಿ ಎಂ ಪದವಿ ಕಾಲೇಜಿನ ವಿದ್ಯಾರ್ಥಿನಿಯರಾದ ಕು. ರುಚಿರಾ ಮತ್ತು ಕು.ಪೂಜಾ ಹಾಗೂ ಲ್ಯಾಬ್ ಅಸಿಸ್ಟೆಂಟ್ ಶ್ರೀ ಯಶೋಧರ ಸಹಕರಿಸಿದರು. ಪ್ರೌಢಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದರು.