ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್ ನ ಸಹಭಾಗಿತ್ವದಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ ಆ.21ರಂದು ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ ಪ್ರಾಂಶುಪಾಲರು ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಇವರು ವಹಿಸಿದರು ಹಾಗೂ ಮುಖ್ಯ ಅತಿಥಿಗಳಾಗಿ ಡಾ.ವಿನಯ ಕಿಶೋರ್ ಸ್ತ್ರೀ ರೋಗ ತಜ್ಞರು ಬೆನಕ ಹೆಲ್ತ್ ಸೆಂಟರ್ ಉಜಿರೆ ಇವರು ವಹಿಸಿ ವಿದ್ಯಾರ್ಥಿಗಳಿಗೆ ಹದಿ ಹರೆಯದ ಸಮಸ್ಯೆ ಆರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಆನ್ಸ್ ಕ್ಲಬ್ ನ ಅಧ್ಯಕ್ಷ ಗಾಯತ್ರಿ ಶ್ರೀಧರ್ ಹಾಗೂ ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು.
ಪಾಲಿಟೆಕ್ನಿಕ್ ಕಾಲೇಜುನ ಎಲ್ಲಾ ಮಹಿಳಾ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
p>