Site icon Suddi Belthangady

ಮುಂಡಾಜೆ: ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮ ಸಭೆ- ವೈದ್ಯಾಧಿಕಾರಿಯ ಸಂಪರ್ಕ ಸಂಖ್ಯೆಯನ್ನು ಆರೋಗ್ಯ ಕೇಂದ್ರದಲ್ಲಿ ಅಳವಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯ- ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಗಣೇಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಆ.22ರಂದು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವೇದಿಕೆಯಲ್ಲಿ ಮಾರ್ಗದರ್ಶಕ ಅಧಿಕಾರಿಯಾಗಿ ಸಹಕಾರ ಸಂಘ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಗ್ರಾ.ಪಂ. ಉಪಾಧ್ಯಕ್ಷೆ ಸುಮಲತಾ, ಗ್ರಾ.ಪಂ.ಸದಸ್ಯರಾದ ರಂಜಿನಿ ಜ್ಯೋತಿ, ಅಶ್ವಿನಿ, ರಾಮಣ್ಣ ಶೆಟ್ಟಿ, ಜಗದೀಶ್, ಯಶೋಧ, ರವಿಚಂದ್ರ, ವಿಮಲ, ವಿಶ್ವನಾಥ್ ಶೆಟ್ಟಿ, ಆಶಾಕಾರ್ಯಕರ್ತೆಯರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯತ್ ವ್ಯಪ್ತಿಯ ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಆರೋಗ್ಯಾಧಿಕಾರಿಗಳು ವಾರಕ್ಕೆ ಎರಡು ದಿನ ಮುಂಡಾಜೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು.ಮತ್ತು ವೈದ್ಯಾಧಿಕಾರಿಯ ಸಂಪರ್ಕ ಸಂಖ್ಯೆಯನ್ನು ಆರೋಗ್ಯ ಕೇಂದ್ರದಲ್ಲಿ ಅಳವಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಸ್ವಾಗತಿಸಿ, ಖರ್ಚು ಹಾಗೂ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು.

Exit mobile version