ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಅಲ್ಪೋನ್ಸ್ ಫ್ರಾಂಕೊ ಖಂಡನೆ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ಮಂಗಳೂರಿನ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ ಎಂದು ಕರ್ನಾಟಕ ಕ್ರೈಸ್ತ ಸಂಘದ (KCS) ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ಪತ್ರಿಕಾ ಪ್ರಕಟಣೆಯಲ್ಲಿ ಆ.22ರಂದು ತಿಳಿಸಿದ್ದಾರೆ.

ಓರ್ವ ಜನಪ್ರತಿನಿಧಿಯನ್ನೇ ಗುರಿಯಾಗಿಸಿ ಇಂತಹ ಕೃತ್ಯ ನಡೆಸುವುದರಲ್ಲಿ ಫ್ಯಾಸಿಸ್ಟರ ಇಂತಹ ಕೃತ್ಯ ಸಮಾಜಕ್ಕೆ ಮಾರಕವಾಗಿದೆ.ಈ ದೇಶದಲ್ಲಿ ಕಾನೂನು ಎಲ್ಲರಿಗೂ ಅನ್ವಯ.

ನೇರ ಎದುರಿಸಲು ತಯಾರಿಲ್ಲದ ಸಂಘ ಪರಿವಾರದ ಮನಸ್ಥಿತಿಯ ಜನರು ಐವನ್ ಡಿಸೋಜಾ ಮನೆಯ ಮೇಲೆ ಕಲ್ಲು ತೂರಿ ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿ ಅಶಾಂತಿ ಹುಟ್ಟಿಸಲು ಹೊಂಚು ಹಾಕುತ್ತಿದ್ದಾರೆ. ಈ ರೀತಿಯ ಮಾರ್ಗ ಅನುಸರಿಸಿರುವುದು ಖಂಡನೀಯ.

ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಲ್ಲು ತೂರಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕ್ರೈಸ್ತ ಸಂಘದ (KCS) ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here