Site icon Suddi Belthangady

ಇಂದಬೆಟ್ಟು ಗ್ರಾ.ಪಂನ ಅವ್ಯವಹಾರ ಆರೋಪ ಪ್ರಕರಣ- ಲೋಕಾಯುಕ್ತ ತನಿಖೆಯ ವರದಿ ಬಹಿರಂಗ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ 15ನೇ ಹಣಕಾಸಿನ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಜು.9,10ರಂದು ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಹಿರಿಯ ಉಪ ನಿರ್ದೇಶಕರು ತಾಂತ್ರಿಕ ವಿಭಾಗದ ಇಂಜಿನಿಯರ್ ಪ್ರಕಾಶ್ ಬಣಕಾರ್ ಮತ್ತು ಸಹಾಯಕ ಇಂಜಿನಿಯರ್ ತೇಜಶ್ರೀ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಯ ನೇತೃತ್ವದ ತಂಡ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಆಗಮಿಸಿ ತನಿಖೆ ಮಾಡಿ ಹೋಗಿದ್ದರು. ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಮಾಡಿ 26 ಪುಟಗಳ ವರದಿ ನೀಡಿದ್ದು. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 15ನೇ ಹಣಕಾಸಿನ ಯೋಜನೆಯ 2021-22ರಲ್ಲಿ ನಡೆದ ವಿವಿಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಬಂಗಾಡಿ ನಿವಾಸಿ ಜಯರಾಮ.ಕೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ಸಂಬಂಧ ಬೆಂಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಇದೀಗ ಕ್ರಮ ಕೈಗೊಳ್ಳಲು ವರದಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು ಗ್ರಾಮ ಪಂಚಾಯತ್ ನಲ್ಲಿ 13 ಕಾಮಗಾರಿಯಲ್ಲಿ ಭ್ರಷ್ಟಾಚಾರ ಮಾಡಿರುವ ಬಗ್ಗೆ ತನಿಖೆಯಲ್ಲಿ ಪತ್ತೆ ಹಚ್ಚಿದ್ದಾರೆ.

ಬೆಂಗಳೂರು ಲೋಕಾಯುಕ್ತ ತಾಂತ್ರಿಕ ವಿಭಾಗದ ಲೆಕ್ಕ ಪರಿಶೋಧನ ಅಧಿಕಾರಿ ಹಾಗೂ ತನಿಖಾಧಿಕಾರಿ ಬಣಕಾರ್ ಪ್ರಕಾಶ್ ಕುಮಾರ್ ಮತ್ತು ತಾಂತ್ರಿಕ ವಿಭಾಗದ ಸಹಾಯಕ ಇಂಜಿನಿಯರ್ ತೇಜಶ್ರೀ ಮದ್ದೋಡಿ ಅವರು ತನಿಖೆ ನಡೆಸಿದ ವರದಿಯಲ್ಲಿ ನಾಲ್ಕು ಜನ ಕರ್ತವ್ಯ ಲೋಪ ಎಸಗಿರುವುದಾಗಿ ಲೋಕಾಯುಕ್ತ ಹಿರಿಯ ಅಧಿಕಾರಿಗಳಿಗೆ ನಾಲ್ಕು ಜನರ ವಿರುದ್ಧ ಕ್ರಮ ಕೈಗೊಳ್ಳಲು ಆ.5ರಂದು ವರದಿ ಸಲ್ಲಿಸಿದ್ದಾರೆ.

Exit mobile version