


ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಭಾರತ್ ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀ ಧ.ಮ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ನಡೆದಂತಹ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಧ.ಮ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಗೈಡ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.


ಸ್ಕೌಟ್ ವಿಭಾಗದಲ್ಲಿ ದ್ವಿತೀಯ ಸ್ಥಾನ, ಕಬ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬುಲ್ ಬುಲ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.









