ಶ್ರೀರಾಮ ಕ್ಷೇತ್ರ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ- ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಬಿ.ಕೆ.ಹರಿಪ್ರಸಾದ್ ರವರಿಂದ ಉದ್ಘಾಟನೆ

0

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.25ರಂದು ಶಾಖಾ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ನಡೆಯಿತು.

ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿ ನಾರಾಯಣ ಗುರು ಕುರಿತು ಮಾತನಾಡಿದರು. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು. ಇದೇ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here