Site icon Suddi Belthangady

ಮದ್ದಡ್ಕದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

ಕುವೆಟ್ಟು: ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಪೂಜಾ ವಿಧಾನಗಳನ್ನು ನೆರವೇರಿಸಿ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.ಸಮಿತಿ ಅಧ್ಯಕ್ಷ ಮನೋಹರ ಕೇದಳಿಕೆ, ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ‌ಪ್ರಧಾನ ಕಾರ್ಯದರ್ಶಿ ಪ್ರೀತಮ್ ಅಚಾರ್ಯ, ಕೋಶಾಧಿಕಾರಿ ಸಚಿನ್ ವರ್ಧನ್, ಗಣೇಶ್ ಶೆಟ್ಟಿ ಅರ್ಕಜೆ, ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಹಾಗೂ ಸಮಿತಿ ಸರ್ವ ಸದಸ್ಯರು ಉಪಸ್ಥಿತರಿದ್ದರು.

Exit mobile version