Site icon Suddi Belthangady

ಕನ್ಯಾಡಿ: 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ಪಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅವಿನಾಶ್ ಶೆಟ್ಟಿ, ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರುಗಳಾದ ಮನೋಹರ್ ರಾವ್ ಯು.ಬಿ, ಪ್ರಭಾಕರ್ ಗೌಡ ಬೊಲ್ಮ, ಗೌರವ ಸಲಹೆಗಾರರಾದ ಕೃಷ್ಣಪ್ಪ ಗುಡಿಗಾರ್, ರಾಜೇಂದ್ರ ಅಜ್ರಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಂದ ಭಟ್, ಸ್ವಾಗತ ಸಮಿತಿಯ ಸಂಯೋಜಕ ಮುರಳೀಧರ ದಾಸ್ ಧರ್ಮಸ್ಥಳ, ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಪ್ರಭಾಕರ್ ಪೂಜಾರಿ ಡಿ, ಹಿಂದೂ ಧಾರ್ಮಿಕ ಸೇವಾ ಸಮಿತಿಯ ಉಪಾಧ್ಯಕ್ಷ ಅರುಣ್ ನಾಯ್ಕ್ ನೆಲ್ಲಿಗುಡ್ಡೆ, ಕೋಶಾಧಿಕಾರಿ ಮಹಾಬಲ ನಾಯ್ಕ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Exit mobile version