ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಢೀರ್ ಭೇಟಿ

0

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ, ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ದಿಡೀರ್ ಭೇಟಿ ನೀಡಿ, ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡರು.ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಭೇಟಿ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

p>

LEAVE A REPLY

Please enter your comment!
Please enter your name here