Site icon Suddi Belthangady

ಬೆಳ್ತಂಗಡಿ: ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28ರಂದು ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಕುಮಾರ್ ಶೆಟ್ಟಿ ಅವರು ನೆರವೇರಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಚರಣ್ ಕುಮಾರ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ವಾರಿಜಾ, ಶಾಲಾ ಮುಖ್ಯಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಕಾರ್ಯ ಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು.ಸಿ.ಆರ್‌.ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ ಶಿಕ್ಷಕಿ ಚಿತ್ರ ರವರು ವಂದನಾರ್ಪಣೆ ಮಾಡಿದ ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಶುಭರವರು ನಿರೂಪಿಸಿದರು. ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಅತಿಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Exit mobile version