ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

0

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆ.24ರಂದು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ ಪ್ರಾಂಶುಪಾಲರು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇವರು ವಹಿಸಿದ್ದರು ಹಾಗೂ ಶ್ರೀ ಜನಾರ್ಧನ ಕಾರ್ಯನಿರ್ವಹಣಾಧಿಕಾರಿ ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಹಾಗೂ ಪ್ರವೀಣ್ ರಕ್ತನಿಧಿ ಸಂಚಾಲಕರು ಬ್ಲಡ್ ಬ್ಯಾಂಕ್ ಮಂಗಳೂರು ಮತ್ತು ಕ್ಷಿತಿ ಕಂಠ ಭಟ್ ರಕ್ತ ಪ್ರಯೋಗಾಲಯದ ಅಧಿಕಾರಿ, ಎಸ್ ಡಿ ಎಂ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಉಜಿರೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಹಾಗೂ ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಪ್ರಕಾಶ್ ಮತ್ತು ಉಪ ಯೋಜನಾಧಿಕಾರಿ ಲೋಹಿತ್ ಮುಂತಾದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಮತ್ತು ಕಾಲೇಜುನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಈ ರಕ್ತದಾನ ಶಿಬಿರದಲ್ಲಿ ಒಟ್ಟು 102 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here