ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ- ಮೌಲ್ಯಯುತ ಜೀವನ ನಡೆಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು: ವಿವೇಕ್ ವಿ.ಪಾಯ್ಸ್

0

ಉಜಿರೆ: ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೂ ಕೂಡ ಬಲಿಯಾಗದೆ ತಮ್ಮನ್ನು ತಾವು ನಿಯಂತ್ರಣದಲ್ಲಿ ಇಟ್ಟುಕೊಂಡು ಒಳ್ಳೆಯವರ ಸ್ನೇಹವನ್ನು ಬೆಳೆಸಿ ಉತ್ತಮ ಜೀವನವನ್ನು ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯ್ಸ್ ಹೇಳಿದರು.

ಅವರು ಉಜಿರೆಯ ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಆ.27ರಂದು ನಡೆದ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸುಮಾರು 30 ವರ್ಷಗಳ ತನ್ನ ಸುದೀರ್ಘ ಅನುಭವದಲ್ಲಿ ಅನೇಕ ಮದ್ಯವ್ಯಸನಿಗಳನ್ನು ತಾನು ನೋಡಿದ್ದು ಈ ಚಟಗಳಿಂದ ಅನೇಕರು ಕುಟುಂಬವನ್ನು ಕಳೆದುಕೊಂಡಿದ್ದಾರೆ ಹಾಗೆ ಯಾವುದೇ ಮಹಾ ಗ್ರಂಥಗಳಲ್ಲಿ ಮದ್ಯಪಾನ ಮಾಡಿ ಎನ್ನುವಂತ ಉಲ್ಲೇಖ ಇಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಮಾತನಾಡಿ ವಿದ್ಯಾರ್ಥಿಗಳು ಯಾವುದೇ ಆಮಿಷಕ್ಕೆ ತಮ್ಮನ್ನು ತಾವು ಒಳಪಡಿಸದೆ ಕಾಲೇಜಿನ ಎಲ್ಲಾ ಚಟುವಟಿಕೆಯನ್ನು ಮನಪೂರ್ವಕವಾಗಿ ಮಾಡಬೇಕೆಂದು ಹೇಳಿದರು.

ಎಲ್ಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ರೆಡ್ ಕ್ರಾಸ್ ಸಂಯೋಜಕ ಪ್ರಶಾಂತ್ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಪಾರ್ಶ್ವನಾಥ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here