ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತಿನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.29ರಂದು ಗ್ರಾಮ ಪಂಚಾಯತಿನ ನೇತ್ರಾವತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಬೆಳ್ತಂಗಡಿ ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಪ್ರಿಯಾ ಅಗ್ನೇಸ್ ಮಾರ್ಗದರ್ಶಿಯಾಗಿ ಗ್ರಾಮ ಸಭೆ ಮುನ್ನಡೆಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ.ಸ್ವಾಗತಿಸಿ, ಕಾರ್ಯದರ್ಶಿ ದಿನೇಶ್ ಪಿ. ಅನುಪಾಲನಾ ವರದಿ ಓದಿದರು.ಲೆಕ್ಕ ಸಹಾಯಕಿ ಪ್ರಮೀಳಾ ಆಯವ್ಯಯ ಮಂಡಿಸಿದರು. ಸಿಬ್ಬಂದಿ ಡಾ.ದೇವಿಪ್ರಸಾದ್ ವರದಿ ವಾಚಿಸಿ ನಿರೂಪಿಸಿದರು.