ಬೆಳ್ತಂಗಡಿ: ಬೆಳ್ತಂಗಡಿ ಜೆಸಿಐ ಮಂಜುಶ್ರೀ ವತಿಯಿಂದ ಒಂದು ವಾರಗಳ ಕಾಲ ನಡೆಯುವ ತರಬೇತಿ ಸಪ್ತಾಹ ‘ಶ್ರಾವಣ’ ಇದರ ಉದ್ಘಾಟನಾ ಸಮಾರಂಭವನ್ನು ಆ.25ರಂದು ಬೆಳ್ತಂಗಡಿಯ ಬಿಸಿಎಂ ಹಾಸ್ಟೆಲ್‌ನಲ್ಲಿ ಆಯೋಜಿಸಲಾಯಿತು.
ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ತರಬೇತಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು ನಿರಂತರ ಕಲಿಕೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದರು. ಜೆಸಿಐ ಬೆಳ್ತಂಗಡಿಯು ವ್ಯಕ್ತಿತ್ವ ವಿಕಸನವನ್ನು ರೂಪಿಸುವ ತರಬೇತಿ ಕಾರ್ಯಕ್ರಮ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ. ವಹಿಸಿದ್ದರು.ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಲು ಮತ್ತು ತರಬೇತಿ ನೀಡಲು ವಿನ್ಯಾಸಗೊಳಿಸಲಾದ ಸರಣಿ ತರಬೇತಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.
ನಂತರ ವಲಯ ತರಬೇತುದಾರ ರಂಜಿತ್ ಎಚ್.ಡಿ ಬಳಂಜ ಇವರು ಎರಡು ತಾಸು ಸಭಾ ನಿರ್ವಹಣೆಯ ಬಗ್ಗೆ 50 ಮಂದಿ ಮಕ್ಕಳಿಗೆ ತರಬೇತಿಯನ್ನು ನೀಡಿದರು.
ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷ ನಾರಾಯಣ ಶೆಟ್ಟಿ ಮಾಡಿದರು. ಪೂರ್ವ ಅಧ್ಯಕ್ಷ ಸುಭಾಶ್ಚಂದ್ರ ಎಂ.ಪಿ., ಜೆಜೆಸಿ ಅಧ್ಯಕ್ಷ ಜೆಜೆಸಿ ಸಮನ್ವೀತ್ ಕುಮಾರ್ ಉಪಸ್ಥಿತರಿದ್ದರು.ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.