Site icon Suddi Belthangady

ಶ್ರೀರಾಮ ಕ್ಷೇತ್ರ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ- ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಪದಾಧಿಕಾರಿಗಳ ಭೇಟಿ, ಪಾದ ಪೂಜೆ, ಸ್ವಾಮೀಜಿಯವರಿಂದ ಗೌರವ

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.29ರಂದು ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭೇಟಿ ನೀಡಿ ಸ್ವಾಮೀಜಿಯವರ ಪಾದ ಪೂಜೆ ನೆರವೇರಿಸಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದವರು.

ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ಅಧ್ಯಕ್ಷೆ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ.ಬಂಗೇರ, ಮಾಜಿ ಅಧ್ಯಕ್ಷರುಗಳಾದ ವಿನೋದಿನಿ ರಾಮಪ್ಪ, ರಾಜಶ್ರೀ ರಮಣ್ ಇತರ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಿಸಿದರು.

Exit mobile version