Site icon Suddi Belthangady

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ವಿದ್ಯಾನಿಧಿ ಹಸ್ತಾಂತರ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ನಾಲ್ಕು ಲಕ್ಷದ ನಲ್ವತ್ತೊಂಭತ್ತು ಸಾವಿರದ ಮುನ್ನೂರ ಐವತೈದು ರೂಪಾಯಿಯನ್ನು ವಿದ್ಯಾನಿಧಿಯಾಗಿ ದೇಣಿಗೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಕಾರ್ಯದರ್ಶಿ ಕುಶಾಲಪ್ಪ ಗೌಡ ಪೂವಾಜೆ ಮತ್ತು ಎಲ್ಲಾ ಪದಾಧಿಕಾರಿಗಳಿಗೂ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯರು, ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version